ಕೋಲಾರ, ಕರ್ನಾಟಕ ಲೋಕಾಯುಕ್ತ, ಜಿಲ್ಲಾಡಳಿತ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಲೋಕಾಯುಕ್ತ ಕಾಯ್ದೆ-೧೯೮೪ ರ ಅರಿವು ಕರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಾನ್ಯ ಉಪಲೋಕಾಯುಕ್ತರಾದ ಗೌರವಾನ್ವಿತ ನ್ಯಾಯಮರ್ತಿ ಕೆ.ಎನ್.ಫಣೀಂದ್ರ ರವರು ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಸರ್ವಜನಿಕರಿಗೆ ಲೋಕಾಯುಕ್ತ ಕಾಯ್ದೆ ಕುರಿತು ಅರಿವು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ದೇವರಾಜ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನಿಲ ಎಸ್.ಹೊಸಮನಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನರ್ವಹಣಾಧಿಕಾರಿ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್, ಕರ್ನಾಟಕ ಲೋಕಾಯುಕ್ತದ ಉಪ ನಿಬಂಧಕರಾದ ಚನ್ನಕೇಶವರೆಡ್ಡಿ, ಕರ್ನಾಟಕ ಲೋಕಾಯುಕ್ತ ಕಾನೂನು ಅಭಿಪ್ರಾಯ-೨ ಸಹಾಯಕ ನಿಬಂಧಕರಾದ ಸಂದೀಪ್ ಎಸ್.ರೆಡ್ಡಿ, ಡಿ.ಸಿ.ಎಫ್ ಏಡುಕೊಂಡಲು,ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕ ಬಿ.ಕೆ.ಉಮೇಶ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.