ಅಬಕಾರಿ ಅಧಿಕಾರಿಗಳಿಗೆ ಕಾನೂನು ಅರಿವು ಕಾರ್ಯಗಾರಕೋಲಾರ

ಮಾದಕ ದ್ರವ್ಯ ಅಪರಾಧಗಳಲ್ಲಿ ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳಿಗೆ ಕಾನೂನು ಅರಿವು ಕಾರ್ಯಗಾರ ಮಾದಕ ದ್ರವ್ಯ ಅಪರಾಧಗಳಲ್ಲಿ ಅಪರಾಧಿಗಳಿಗೆ ಕಾನೂನಡಿಯಲ್ಲಿ ಶಿಕ್ಷೆಗೆ ಒಳಪಡಿಸಲು ಅಬಕಾರಿ ಅಧಿಕಾರಿಗಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ರಮೇಶ್ ಕುಮಾರ್. ಹೆಚ್ ರವರು ಅಬಕಾರಿ ಜಿಲ್ಲಾ ಕಛೇರಿಯಲ್ಲಿ ಆಯೋಜಿಸಲಾಗಿತ್ತು. ಮಾನ್ಯ ಜೆ.ಎಂಎಫ್.ಸಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ನಿರ್ದೇಶಕರಾದ ಶಿವಲಿಂಗಪ್ಪ ಹೂಗಾರ ರವರು ಎನ್.ಡಿ.ಪಿ.ಎಸ್ ತನಿಖಾ ಕಾರ್ಯವಿಧಾನದ ಬಗ್ಗೆ ಮತ್ತು ತನಿಖೆಯಲ್ಲಿ ಅಪರಾಧಿಗಳಿಗೆ ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಅಳವಡಿಸಿಕೊಳ್ಳಬೇಕಾದ ಕಾನೂನಾತ್ಮಕ ಅಂಶಗಳ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಅಬಕಾರಿ ಅಧೀಕ್ಷಕರಾದ ರಂಗಪ್ಪ.ಆರ್, ಶೈಲ ಅವಜಿ, ಮತ್ತು ವಿಶ್ವನಾಥ ಬಾಬು ಅಬಕಾರಿ ಉಪ ಅಧೀಕ್ಷಕರುಗಳು ಹಾಗೂ ಎಲ್ಲಾ ತಾಲ್ಲೂಕಿನ ವಲಯ ನಿರೀಕ್ಷಕರು ಮತ್ತು ಉಪ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ಹಾಜರಿದ್ದರು.

Leave a Reply

Your email address will not be published. Required fields are marked *