ಕೋಲಾರ:- ಭಾರತೀಯ ಕಾಂಗ್ರೆಸ್ ನಾಯಕರಾದ ಶ್ರೀ ರಾಹುಲ್ ಗಾಂಧೀಜಿಯವರು ಹಮ್ಮಿಕೊಂಡಿರುವ “ಭಾರತ್ ಜೋಡೋ ಯಾತ್ರೆ” ಕರ್ನಾಟಕ ರಾಜ್ಯದಲ್ಲಿ ಸಾಗುತ್ತಿದ್ದು, ಅ.೭ ರಂದು ಮಂಡ್ಯ ಜಿಲ್ಲೆಯಲ್ಲಿ ಸಾಗುವ ಪಾದ ಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟಿçÃಯ ನಾಯಕಿ ಪ್ರಿಯಾಂಕಾ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್ ತಿಳಿಸಿದರು.
ಅ.೭ ರ ಪ್ರಿಯಾಂಕ ಗಾಂಧಿ ಆಗಮನದ ಹಿನ್ನಲೆಯಲ್ಲಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಲು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಸಭೆಯಲ್ಲಿ ಮಾತನಾಡಿದ ಮಾನ್ಯ ಶಾಸಕರು ನಮ್ಮ ದೇಶದ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ರಾಹುಲ್ ಗಾಂಧೀಜಿಯವರು ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದಾರೆ, ಗಾಂಧಿ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿರುವ ಕುಟುಂಬ ಅವರ ಕಾರ್ಯಕ್ರಮದಲ್ಲಿ ಭಾಗವಹಿಸೋಣ, ಜತೆಗೆ ಜೋಡೋ ಯಾತ್ರೆ ಬಳ್ಳಾರಿ ಪ್ರವೇಶಿಸುತ್ತಿದ್ದಂತೆ ಅಲ್ಲಿಗೆ ಸೋನಿಯಾ ಗಾಂಧಿಯೂ ಸೇರಿಕೊಳ್ಳಲಿದ್ದಾರೆ ಎಂದರು.
ಅ.೩ ಮಂಡ್ಯ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಪ್ರದರ್ಶಿಸೋಣ ಎಂದ ಅವರು, ದೇಶದಲ್ಲಿ ನಡೆಯುತ್ತಿರುವ ದುರಾಡಳಿತ, ಭ್ರಷ್ಟಾಚಾರ, ಕೋಮು ಸಾಮರಸ್ಯ ಕದಡುವಿಕೆ ಕೃತ್ಯಗಳಿಗೆ ಕಾರಣವಾದ ಸರ್ಕಾರದ ನೀತಿಯನ್ನು ಜನರಿಗೆ ತಿಳಿಸಲು ಈ ಯಾತ್ರೆ ನಡೆಸಲಾಗುತ್ತಿದೆ, ಒಡೆದು ಹೋದ ಮನಸ್ಸುಗಳನ್ನು ಒಂದು ಮಾಡುವ ಮೂಲಕ ಕೋಮು ಸಾಮರಸ್ಯ ತರುವ ಉದ್ದೇಶ ರಾಹುಲ್ ಗಾಂಧಿಯವರ ಯಾತ್ರೆಯದ್ದಾಗಿದೆ ಎಂದರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧಿಕಾರಕ್ಕೆ ಆಸೆ ಪಟ್ಟವರಲ್ಲ, ಅಧಿಕಾರ ಸಿಕ್ಕಾಗಲೇ ಮನಮೋಹನ್ ಸಿಂಗ್‌ಗೆ ಅಧಿಕಾರ ಕೊಟ್ಟರು, ಇಂತಹ ತ್ಯಾಗದ ಕುಟುಂಬದ ವಿರುದ್ದ ಬಿಜೆಪಿಯವರು ನಡೆಸುತ್ತಿರುವ ಅಪಪ್ರಚಾರ ಖಂಡನೀಯ ಎಂದ ಅವರು,ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಲಿದ್ದು, ಬಿಜೆಪಿಗೆ ನಡುಕ ಶುರುವಾಗಿದೆ ಎಂದರು.
ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ, ದೇಶಕ್ಕೆ ಅಚ್ಚೆದಿನ್ ತರುವುದಾಗಿ ಹೇಳಿದ್ದ ಮೋದಿಯವರು ಏನು ಮಾಡುತ್ತಿದ್ದಾರೆ, ಜನರ ಬದುಕು ಸಂಕಷ್ಟಕ್ಕೆ ಸಿಲುಕಿದೆ, ಬಡವರ ಬದುಕು ಕಷ್ಟವಾಗಿದೆ, ಇಂತಹ ಸಂದರ್ಭದಲ್ಲಿ ಜನರಿಗೆ ಈ ಸರ್ಕಾರದ ಧೋರಣೆ, ಜನವಿರೋಧಿ ನೀತಿಯನ್ನು ಮನವರಿಕೆ ಮಾಡಿಕೊಡಲು ಈ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಸಾಗಿದೆ ಎಂದರು.ಲ
ವೀಕ್ಷಕರಾಗಿ ಆಗಮಿಸಿದ್ದ ಎಂಎಲ್‌ಸಿ ನಾರಾಯಣಸ್ವಾಮಿ ಮಾತನಾಡಿ, ಭಾರತ್ ಜೋಡೋ ಯಾತ್ರೆ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಜತೆಗೆ ಅ.೩ ರಂದು ಮಂಡ್ಯದಲ್ಲಿ ಪ್ರಿಯಾಂಕ ಗಾಂಧಿ ಸೇರಿಕೊಳ್ಳಲಿದ್ದು, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕ್ರಮವಹಿಸಿ ಎಂದು ಮುಖಂಡರಿಗೆ ಕರೆ ನೀಡಿದರು.
ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲಾ ಕಾಂಗ್ರೆಸ್ಸಿಗರು ಎಂದ ಅವರು, ಡಿಕೆಶಿ,ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಬಿಜೆಪಿಯವರು ವದಂತಿ ಹಬ್ಬಿಸುತ್ತಿದ್ದಾರೆ, ಇದೆಲ್ಲಾ ಸುಳ್ಳು, ಕಾಂಗ್ರೆಸ್ ಸಂಘಟನೆಗೆ ಹೇಳಿ ಮಾಡಿಸಿದ ಪಕ್ಷ, ಸ್ವಾತಂತ್ರö್ಯಕ್ಕಾಗಿ ತ್ಯಾಗ ಮಾಡಿರುವ ಪಕ್ಷ ಎಂದರು.
ಸಭೆಯಲ್ಲಿ ಮಾಜಿ ಸಚಿವ ನಿಸಾರ್ ಅಹಮದ್, ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರತ್ನಮ್ಮ ಸೇರಿದಂತೆ ಬ್ಲಾಕ್ ಅಧ್ಯಕ್ಷರು, ವಿವಿಧ ಘಟಕಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.