ಕೋಲಾರ, ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಆಯ್ಕೆಯಾಗಿರುವ ಪ್ಯಾನಲ್ ವಕೀಲರು ಪ್ರಾಧಿಕಾರದ ಧ್ಯೇಯೋದ್ದೇಶ ಮತ್ತು ಕಾನೂನಿಗೆ ಸಂಬAಧಿಸಿದ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಜಾಗೃತಿ ಮಾಡಿಸಿ ಶೋಷಿತರಿಗೆ ಹಕ್ಕುಗಳನ್ನು ದೊರಕಿಸಿಕೊಡುವ ಕೆಲಸ ಮಾಡಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕೆ.ಆರ್.ನಾಗರಾಜ ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದಿAದ ಕಾರ್ಯಗಾರವನ್ನು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಪ್ಯಾನಲ್ ವಕೀಲರ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ಯಾನಲ್ ವಕೀಲರಿಗೆ ಹಲವಾರು ಅವಕಾಶಗಳಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕು. ಪ್ಯಾನಲ್ ವಕೀಲರು ಕೆಲಸವನ್ನು ಹಗುರವಾಗಿ ಪರಿಗಣಿಸದೆ ಶ್ರದ್ಧೆಯಿಂದ ಕೆಲಸ ಮಾಡಬೇಕು. ಪ್ಯಾನಲ್ ವಕೀಲರು ಜಿಲ್ಲಾ ಕಾನೂನು ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾ ವಕೀಲ ಸಂಘದ ಅಧ್ಯಕ್ಷರಾದ ಶ್ರೀ ಜಿ.ಶ್ರೀಧರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ಯಾನಲ್ ವಕೀಲರಾಗಿ ಆಯ್ಕೆ ಆಗುವುದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಈಗ ಹೊಸದಾಗಿ ಆಯ್ಕೆಯಾದ ಪ್ಯಾನಲ್ ವಕೀಲರು ಮುಂದೆ ತಮ್ಮ ವೃತ್ತಿಯಲ್ಲಿ ಹೆಚ್ಚು ಪ್ರಕರಣಗಳನ್ನು ನಡೆಸಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ, ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುನಿಲ ಎಸ್ ಹೊಸಮನಿ, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ದಿವ್ಯ.ಪಿ.ಕೆ, ಪ್ರಧಾನ ಮುಖ್ಯ ನ್ಯಾಯಾಧಿಕಾರಿ ಮತ್ತು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಬಾಲಚಂದ್ರ ಎನ್.ಭಟ್, ಎರಡನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ.ರಂಗೇಗೌಡ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿವೇಕ್ ಗ್ರಾಮೋಪಧ್ಯಾಯ, ಎರಡನೇ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ ಬ್ಯಾಡಗಿ ಅವರು ಕಾರ್ಯಾಗಾರದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು.
ಕಾರ್ಯಾಗಾರದಲ್ಲಿ ಕೋಲಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು, ಕಾನೂನು ಸೇವಾ ಸಮಿತಿಗಳಿಗೆ ಹೊಸದಾಗಿ ನೇಮಕವಾದ ೬೮ ಪ್ಯಾನಲ್ ವಕೀಲರು ಭಾಗವಹಿಸಿದ್ದರು.