ಕಾರ್ಮಿಕರಿಗೆ ನೆರವಾಗುವುದು ಕಾಂಗ್ರೆಸ್ ಪಕ್ಷ ಮಾತ್ರ-ಎಸ್.ಎನ್.ನಾರಾಯಣಸ್ವಾಮಿ

ಕೋಲಾರ,ಸೆ.೨೬: ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾರ್ಮಿಕ ಸಚಿವರಾಗಿರುವಾಗ ಕಾರ್ಮಿಕ ವರ್ಗಕ್ಕೆ ಉಪಯೋಗವಾಗುವ ರೀತಿಯಲ್ಲಿ ಹಲವು ಯೋಜನೆಗಳು ಜಾರಿಗೆ ತಂದರು ಆದರೆ ಈಗಿನ ಬಿಜೆಪಿ ಸರಕಾರ ನಿರ್ಲಕ್ಷ್ಯ ತೋರಿದ್ದಾರೆ ವಿವಿಧ ರೀತಿಯ ಕೆಲಸಗಳಲ್ಲಿ ತೊಡಗಿಸಿಕೊಂಡವರ ಕಾರ್ಮಿಕರ ನೆರವಿಗೆ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.
ಬಂಗಾರಪೇಟೆ ನಗರದ ಕಾಂಗ್ರೆಸ್ ಕಛೇರಿಯಲ್ಲಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ತಾಲೂಕು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾರ್ಮಿಕರು ರೈತರ ಬೆನ್ನೆಲುಬು ಮತ್ತು ಕಾರ್ಮಿಕರು ಅದಕ್ಕಾಗಿ ಕಾರ್ಮಿಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಆದರೆ ಬಿಜೆಪಿ ನೇತೃತ್ವದ ಸರಕಾರದಿಂದ ಕಾರ್ಮಿಕ ವಿರೋಧಿ ನೀತಿಗಳಿಂದ ಕಾರ್ಮಿಕರು ಬೀದಿಬೀಳುವ ಸ್ಥಿತಿಗೆ ತಂದಿದ್ದಾರೆ ಮುಂದಿನ ಚುನಾವಣೆಯಲ್ಲಿ ಕಾರ್ಮಿಕರು ಬಿಜೆಪಿಗೆ ತಕ್ಕಪಾಠ ಕಲಿಸುತ್ತಾರೆ ಎಂದರು
ದೇಶದಲ್ಲಿನ ಅಸಂಖ್ಯಾತ ಕಾರ್ಮಿಕರ ಸ್ಥಿತಿ-ಗತಿ ಅರಿತು ಅವರ ಅಭಿವೃದ್ಧಿಗೆ ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಬೇಕಾಗಿದೆ ಎಲ್ಲಾ ವರ್ಗದ ಕಾರ್ಮಿಕರ ಅಭಿವೃದ್ಧಿಗೆ ಯಾವುದೇ ಸರ್ಕಾರವಾಗಲಿ ದುಡಿಯಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಹೊನ್ನೇನಹಳ್ಳಿ ಯಲ್ಲಪ್ಪ ಮಾತನಾಡಿ ಕಟ್ಟಡ ನಿರ್ಮಾಣ ಕಾರ್ಮಿಕರ ಅಭಿವೃದ್ಧಿಗೆ ಸರಕಾರಗಳು ಅನೇಕ ಯೋಜನೆಗಳನ್ನು ರೂಪಿಸಲಾಗಿದೆ ಆದರೆ ಅ ಯೋಜನೆಗಳು ನಿಜವಾದ ಕಟ್ಟಡ ಕಾರ್ಮಿಕರಿಗೆ ಮಾಹಿತಿಯ ಕೊರತೆಯಿಂದ ತಲುಪುತ್ತಿಲ್ಲ ಮಾಹಿತಿ ಜೊತೆಗೆ ಅರಿವು ಮೂಡಿಸುವ ಕಾರ್ಯದಲ್ಲಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ ಜಿಲ್ಲೆಯಾದ್ಯಂತ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ ಅದೇ ರೀತಿಯಲ್ಲಿ ನಮ್ಮ ಸಂಘಟನೆಯ ಸದಸ್ಯರಾಗಿ ಸರಕಾರ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು ಎಂದರು
ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ಹಾಗೂ ಗುರುತಿನ ಚೀಟಿ ವಿತರಿಸಲಾಯಿತು. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಾರ್ಥಸಾರಥಿ, ಜಿಲ್ಲಾ ಕಟ್ಟಡ ಕಾರ್ಮಿಕ ಸಂಘದ ಮುಖಂಡರಾದ ಕೊಡಿಯಪ್ಪ, ಯಲ್ಲಮ್ಮ, ಚಂದ್ರಪ್ಪ, ಬಾಬು, ನಾರಾಯಣಪ್ಪ, ನಾಗೇಶ್, ಲಕ್ಷ್ಮೀ, ರತ್ನಮ್ಮ ಮುಂತಾದವರು ಇದ್ದರು.

Leave a Reply

Your email address will not be published. Required fields are marked *