ಕೋಲಾರ, ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ ೧೩ ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ದಿನವೇ ೦೯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ.
ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜೆ ಡಿ ಎಸ್ ಪಕ್ಷದ ಅಭ್ಯರ್ಥಿ ಸಿ ಎಂ ಆರ್ ಶ್ರೀನಾಥ್, ಕೆ ಆರ್ ಎಸ್ ಪಕ್ಷದಿಂದ ಇಂದಿರಾ ರೆಡ್ಡಿ ಹಾಗೂ ಪಕ್ಷೇತರ ಅಭ್ಯರ್ಥಿ ವೆಂಕಟಾಚಲಪತಿ. ಜಿ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಮಾಲೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಹೂಡಿ ವಿಜಯಕುಮಾರ್, ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿಯಾಗಿ ಎ. ವಿ ಮಹೇಶ್ ಹಾಗೂ ಜೆ ಡಿ ಎಸ್ ಅಭ್ಯರ್ಥಿ ಜೆ ಇ ರಾಮೇಗೌಡ ಅವರು ನಾಮಪತ್ರ ಸಲ್ಲಿಸಿದ್ದಾರೆ.
ಕೆ ಜಿ ಎಫ್ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರೂಪಕಲಾ ಶಶಿಧರ್ ರವರು ನಾಮಪತ್ರ ಸಲ್ಲಿಸಿದ್ದಾರೆ.
ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಿಂದ ಕೆ ಆರ್ ಎಸ್ ಅಭ್ಯರ್ಥಿಯಾಗಿ ರಾಜಾ ಎಂ ಮತ್ತು ಜೆಡಿಎಸ್ ಅಭ್ಯರ್ಥಿ ಮಲ್ಲೇಬಾಬು ಅವರು ನಾಮಪತ್ರ ಸಲ್ಲಿಸಿದ್ದಾರೆ.
ಶ್ರೀನಿವಾಸಪುರ ಹಾಗೂ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಯಾವುದೇ ನಾಮಪತ್ರ ಸಲ್ಲಿಕೆಯಾಗಿರುವುದಿಲ್ಲ.
ನಾಮಪತ್ರ ಸಲ್ಲಿಸಲು ಏಪ್ರಿಲ್ ೨೦ ಕೊನೆ ದಿನವಾಗಿದೆ. ಏಪ್ರಿಲ್ ೨೧ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ ೨೪ ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ ೧೦ ರಂದು ಮತದಾನ ನಡೆಯಲಿದ್ದು, ಮೇ ೧೩ ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.