ಗ್ರಾಮಗಳ ಅಭಿವೃದ್ಧಿ ವಿಷಯದಲ್ಲಿ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆ ಆಗಬಾರದು – ಸಂಸದ ಎಸ್.ಮುನಿಸ್ವಾಮಿ.

ಕೋಲಾರ, ಆದರ್ಶ ಗ್ರಾಮಗಳನ್ನು ರೂಪಿಸುವಲ್ಲಿ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಾಗಬಾರದು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ ಅವರು ಅಭಿಪ್ರಾಯಪಟ್ಟರು.
ಇಂದು ಮುಳಬಾಗಿಲು ತಾಲ್ಲೂಕಿನ ಆವಣಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನ ಮಂತ್ರಿಗಳ ಕನಸಿನ ಯೋಜನೆಯಾದ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಆವಣಿ ಗ್ರಾಮ ಪಂಚಾಯಿತಿಯನ್ನು ಆದರ್ಶ ಗ್ರಾಮವನ್ನಾಗಿ ಅಭಿವೃದ್ಧಿಪಡಿಸಲು ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಮಹಾತ್ಮಾ ಗಾಂಧಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯಡಿ ಇಡೀ ಗ್ರಾಮವನ್ನು ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಕೇಂದ್ರ ಸರ್ಕಾರ ‘ಸಂಸದರ ಆದರ್ಶ ಗ್ರಾಮ ಯೋಜನೆ’ ಜಾರಿ ಮಾಡಿದೆ ಎಂದು ಹೇಳಿದರು.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಎಲ್ಲಾ ಹಳ್ಳಿಗಳಲ್ಲಿ ಮೂಲ ಸೌಕರ್ಯಗಳು ಜಿಲ್ಲೆಗೆ ಮಾದರಿ ಎನಿಸುವಂತೆ ಅಭಿವೃದ್ಧಿ ಪಡಿಸಿಸಲಾಗುತ್ತಿದೆ ಎಂದರು.
ಕoದಾಯ ಇಲಾಖೆ ಅಧಿಕಾರಿಗಳಿಗೆ ಪಿಂಚಣಿ ಅದಾಲತ್ ಮೂಲಕ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಲು ಸೂಚಿಸಲಾಯಿತು. ಎಲ್ಲಾ ಸ್ಮಶಾನಗಳನ್ನು ಸರ್ವೇ ಮಾಡಿಸಲು ಸೂಚಿಸಿದರು. ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸಲು ಸೂಕ್ತ ಬೋರ್ಡ್ಗಳನ್ನು ಹಾಕಬೇಕೆಂದು ತಿಳಿಸಿದರು.
ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹಳೆ ವಿದ್ಯಾರ್ಥಿಗಳೊಂದಿಗೆ ಸಮನ್ವಯ ಸಾಧಿಸಿ ಅವರ ಸಹಕಾರದಲ್ಲಿ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ೯ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಳ್ಳುವಂತೆ ಸಲಹೆ ನೀಡಿದರು.
ಆಹಾರ ಇಲಾಖೆಯ ಅಧಿಕಾರಿಗಳಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ಗಳ ಶೀಘ್ರ ವಿತರಣೆಗೆ ಕ್ರಮ ವಹಿಸುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ದೇವಸ್ಥಾನ, ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ಮೈಕ್‌ಗಳ ಮುಖಾಂತರ ಸಾರ್ವಜನಿಕ ಸೌಲಭ್ಯಗಳನ್ನು ಪ್ರಚಾರಪಡಿಸಲು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಇಲಾಖೆಯ ಯೋಜನೆಗಳನ್ನು ಕರಪತ್ರದ ಮುಖಾಂತರ ಮನೆಮನೆಗೂ ತಲುಪಿಸುವಂತೆ ಮಾಡಬೇಕೆಂದು ಹೇಳಿದರು. ಜಾತ್ರೆಗಳಲ್ಲಿ ಮಳಿಗೆಗಳನ್ನು ಹಾಕಿಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.
ಎಲ್ಲಾ ಕಾರ್ಮಿಕರಿಗೂ ಇ-ಶ್ರಮ್ ಕಾರ್ಡ್ನ್ನು ವಿತರಿಸಲು ಸಂಬoಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮೀನುಗಾರಿಕೆ ಇಲಾಖೆಯ ಯೋಜನೆಗಳ ಬಗ್ಗೆ ರೈತರಿಗೆ ವಿವರಿಸುವಂತ ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು.
ಅಂತಯೇ ಕೃಷಿ ಇಲಾಖೆ, ರೇಷ್ಮೆ ಇಲಾಖೆ, ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಸೇರಿದಂತೆ ಬೆಸ್ಕಾಂ, ನೆಹರು ಯುವ ಕೇಂದ್ರ‍್ರ, ಜಿಲ್ಲಾ ಕೈಗಾರಿಕಾ ಕೇಂದ್ರಗಳ ಮಾಹಿತಿಯನ್ನು ಪಡೆದರು.
ಆವಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಆವಣಿ ಗ್ರಾಮ, ರಾಮಾಪುರ ಗ್ರಾಮ, ಕೆಂಪಾಪುರ ಗ್ರಾಮ, ರಾಮಸಂದ್ರ ಗ್ರಾಮ, ಚೋಳಗುಂಟೆ ಗ್ರಾಮ, ವಿ.ಗುಟ್ಟಹಳ್ಳಿ ಗ್ರಾಮ ಹಾಗೂ ವಿರೂಪಾಕ್ಷಿ ಗ್ರಾಮಗಳಲ್ಲಿ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸುವುದು ಗ್ರಾಮದ ಮನೆಗಳ ಮೇಲೆ ಇರುವ ೧೧ ಕೆ.ವಿ ವಿದ್ಯುತ್ ತಂತಿಯನ್ನು ತೆರವುಗೊಳಿಸುವುದು ಸಿಸಿ ರಸ್ತೆಗಳು ಹಾಗೂ ಶಾಲೆಗಳಿಗೆ ಹೊಸ ಕಟ್ಟಡ ಸೇರಿದಂತೆ ಹಲವು ಬೇಡಿಕೆಗಳನ್ನು ಪೂರೈಸಲು ಗ್ರಾಮಸ್ಥರು ಮಾನ್ಯ ಸಂಸದರ ಮುಂದೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು ೧೫ ದಿನಗಳೊಳಗೆ ಗ್ರಾಮ ಪಂಚಾಯತಿ ವ್ಯಾಪ್ತಿಯೊಳಗಿನ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಮುಳಬಾಗಿಲು ತಹಶೀಲ್ದಾರ್, ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸರ್ವೇಶ್, ದಿಶಾ ಸಮಿತಿ ಸದಸ್ಯರು, ಆವಣಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಗ್ರಾಮದ ಮುಖ್ಯಸ್ಥರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *