ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಸಾರಿಗೆ ಇಲಾಖೆಯ ಸಹಯೋಗದೊಂದಿಗೆ ಇಂದು ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ನಗರಸಭಾ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಓಡಾಡುವ ಆಟೋ ರಿಕ್ಷಾಗಳಿಗೆ ಮತದಾನದ ಅರಿವು ಮೂಡಿಸುವ ಜಾಗೃತಿ ಸ್ಟಿಕ್ಕರ್‌ಗಳನ್ನು ಅಂಟಿಸುವ ಮೂಲಕ ಸ್ವೀಪ್ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಮಾನ್ಯ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್‌ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಎಂ.ನಾರಾಯಣ, ಪ್ರೊಬೇಷನರಿ ಐಎಎಸ್ ಅಧಿಕಾರಿ ವಿನಾಯಕ್ ಹಾಗೂ ಜಿಲ್ಲಾ ಸಾರಿಗೆ ಅಧಿಕಾರಿ ವ್ಯೋಮಕೇಶಪ್ಪ ಸೇರಿದಂತೆ ಮತ್ತಿತರರು ಜಾಗೃತಿ ಸ್ಟಿಕ್ಕರ್ ಅಂಟಿಸಲಾದ ಆಟೋಗೆ ಚಾಲನೆ ನೀಡುವ ಮೂಲಕ ಜಾಗೃತಿ ಮೂಡಿಸಿದರು. ಅಂಬೇಡ್ಕರ್ ವೃತ್ತದಿಂದ ನಗರದ ಕ್ಲಾಕ್ ಟವರ್‌ವರೆಗೆ ಆಟೋದಲ್ಲಿ ಪ್ರಯಾಣಮಾಡುವ ಮೂಲಕ ಸಾರ್ವಜನಿಕರಿಗೆ ನೈತಿಕ ಹಾಗೂ ಕಡ್ಡಾಯ ಮತದಾನದ ಕುರಿತು ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ ಶಾಂತಿ ಸಂಕೇತವಾದ ಪಾರಿವಾಳಗಳನ್ನು ಹಾರಿಬಿಡಲಾಯಿತು ಮತ್ತು ಮತದಾನದ ಆಹ್ವಾನಪತ್ರಿಕೆ ಹಂಚುವ ಮೂಲಕ ವಿಶೇಷವಾದ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು.