ಕೋಲಾರ, ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕರ್ನಾಟಕ ಮಾದ್ಯಮ ಅಕಾಡೆಮಿ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದಲ್ಲಿ ಜುಲೈ 1 ರಂದು ಶನಿವಾರ ನಗರದ ಪತ್ರಕರ್ತರ ಭವನದಲ್ಲಿ ಬೆಳಗ್ಗೆ 10-30 ಗಂಟೆಗೆ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕಾರ್ಯಕ್ರಮವನ್ನು ಉದ್ಘಾಟಿಸುವರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಜಯರಾಮ್ ಎನ್ ಪತ್ರಕರ್ತರ ಸಂಘದ ಪ್ರಶಸ್ತಿ ವಿತರಣೆ ಮಾಡುವರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಪುರಸ್ಕರಿಸುವರು. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಡಿ.ವಿ.ಜಿ ಕುರಿತು ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ವಸತಿ ಸಚಿವರ ಮಾಧ್ಯಮ ಸಂಯೋಜಕ ಎನ್.ಲಕ್ಷ್ಮೀನಾರಾಯಣ ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಿ.ರೂಪ, ಕೆ.ಯು.ಡಬ್ಲ್ಯೂ.ಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಖಜಾಂಚಿ ಎಂ.ವಾಸುದೇವಹೊಳ್ಳ, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಕೆ.ಎಸ್.ಗಣೇಶ್, ವಿ.ಮುನಿರಾಜು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಜಿಲ್ಲೆಯ ಸಮಸ್ತ ಪತ್ರಕರ್ತರು ಆಗಮಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ಕುಮಾರ್ ಕೋರಿದ್ದಾರೆ. ಮಧ್ಯಾಹ್ನ 2-00 ಗಂಟೆಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆಯನ್ನು ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿದ್ಧೋದ್ದೇಶ ಸಹಕಾರ ಸಂಘದ 2022-23ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯನ್ನು ದಿನಾಂಕ 01-07-2023 ರಂದು ಶನಿವಾರ ಮಧ್ಯಾಹ್ನ 3-00 ಗಂಟೆಗೆ ಸಹಕಾರ ಸಂಘದ ಅಧ್ಯಕ್ಷರಾದ ಕೆ.ಎಸ್.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ ಸಂಘದ ಎಲ್ಲಾ ಸದಸ್ಯರು ತಪ್ಪದೇ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಂಘದ ಉಪಾಧ್ಯಕ್ಷರಾದ ಕೋ.ನಾ.ಮಂಜುನಾಥ್ ಕೋರಿದ್ದಾರೆ.