ಕೋಲಾರ, ಕೋಲಾರ ಜಿಲ್ಲೆಯ ರಾಷ್ಟಿಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಮುಳಬಾಗಿಲು ಮತ್ತು ಶ್ರೀನಿವಾಸಪುರ ಚಿಕಿತ್ಸಾ ಘಟಕಕ್ಕೆ ಒಂದು ವರ್ಷದ ಅವಧಿಗೆ ಹಿರಿಯ ಪ್ರಯೋಗಶಾಲಾ ಮೇಲ್ವಿಚಾರಕರು(Senior Tuberculosis Laboratory Supervisor)ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸದರಿ ಹುದ್ದೆಯ ವಿವರ, ವಿದ್ಯಾರ್ಹತೆ ವೇತನದ ಸಂಪೂರ್ಣ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ https://Kolar.nic.in/en/notcecategory/recruitments/ಕೋಲಾರ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪ್ರಕಟವಾಗಿದೆ. ಜುಲೈ ೧೦, ೨೦೨೩ ರಂದು ಬೆಳಿಗ್ಗೆ ೧೦.೦೦ ರಿಂದ ಮದ್ಯಾಹ್ನ ೧.೦೦ ಗಂಟೆಗೆ ಆಸಕ್ತಿಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳೊಂದಿಗೆ ೧ ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ ಇಲ್ಲಿಗೆ ಹಾಜರಾಗಬಹುದು ಎಂದು ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.