ಮತದಾನ ಮಾಡಲು ಮೇ-೧೦ ರಂದು ಕಾರ್ಮಿಕರಿಗೆವೇತನ ಸಹಿತ ರಜೆ

ಕೋಲಾರ, ಭಾರತ ಚುನಾವಣಾ ಆಯೋಗವು ದಿನಾಂಕ: ೧೦-೦೫-೨೦೨೩ರ ಬುಧುವಾರದಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನಕ್ಕೆ ನಿಗಧಿಪಡಿಸಿದೆ. ಸದರಿ ದಿನದಂದು ರಾಜಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ೧೯೫೧ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ ೧೩೫(ಬಿ) ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟಿಯ ಮತ್ತು ಹಬ್ಬದ ರಜೆಗಳು) ಕಾಯ್ದೆ-೧೯೬೩ ಕಲಂ ೩(ಎ) ರನ್ವಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ
ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಸದರಿ ದಿನದಂದು ಕಾಯ್ದೆಯನ್ವಯ ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡುವಂತೆ ಈ ಮೂಲಕ ತಿಳಿಸಲಾಗಿದೆ. ತಪ್ಪಿದಲ್ಲಿ ಸಂಬoಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಕಾರ್ಮಿಕ ಅಧಿಕಾರಿ, ಕೋಲಾರ ಜಿಲ್ಲೆ, ಕೋಲಾರ ಕಾರ್ಮಿಕ ಅಧಿಕಾರಿಯವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *