ಸೆಪ್ಟೆಂಬರ್ ೧೭ ರಂದು ಯೋಗಥಾನ್ ಕಾರ್ಯಕ್ರಮ- ಜಿಲ್ಲಾಧಿಕಾರಿ ವೆಂಕಟ್ ರಾಜಾ.

ಕೋಲಾರ, ಜಿಲ್ಲೆಯಲ್ಲಿ ಸೆಪ್ಟೆಂಬರ್ ೧೬, ೧೭ ರಂದು ಯೋಗಥಾನ್ ಕಾರ್ಯಕ್ರಮದ ಮೂಲಕ ಲಿಮ್ಕಾ, ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಲು ಆಯೋಜಿಸಿರುವ ಯೋಗಥಾನ್ ಕಾರ್ಯಕ್ರಮದ ಅಂಗವಾಗಿ ಸೆಪ್ಟೆಂಬರ್ ೧೩ ರಂದು ಒಂದು ದಿನದ ರಿಹಸÀðಲ್ (ಪೂರ್ವಾಭ್ಯಾಸ) ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಯೋಗಥಾನ್ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಏಕಕಾಲಕ್ಕೆ ೫ ಲಕ್ಷ ಜನರು ಯೋಗ ತರಬೇತಿ ಪಡೆಯುತ್ತಿದ್ದಾರೆ. ರಿಹರ್ಸಲ್ ದಿನದ ತರಬೇತಿಯಿಂದ ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಬಗೆಹರಿಸಲು ಸುಲಭವಾಗುತ್ತದೆ. ಕಡ್ಡಾಯವಾಗಿ ೧೦ ಸಾವಿರ ಜನ ನೋಂದಣಿ ಆಗಬೇಕು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು ನೋಂದಣಿಗೊAಡ ಮಕ್ಕಳ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ನೀಡಬೇಕು. ಈ ಕಾರ್ಯಕ್ರಮದಲ್ಲಿ ೪೦೦ ಯೋಗ ಶಿಕ್ಷಕರು ಭಾಗವಹಿಸಲಿದ್ದಾರೆ. ೫೦ ರಿಂದ ೧೦೦ ಮಕ್ಕಳಿಗೆ ಒಬ್ಬ ಯೋಗ ಶಿಕ್ಷಕರು ಕಾರ್ಯನಿರ್ವಹಿಸುತ್ತಾರೆ. ನಗರದೊಳಗಿನ ಮಕ್ಕಳು ನೋಂದಣಿಯಾದರೆ ಕಾರ್ಯಕ್ರಮ ನಡೆಸಲು ಸುಲಭವಾಗುತ್ತದೆ. ತರಬೇತಿ ದಿನದಂದು ಪೊಲೀಸ್ ಭದ್ರತೆ ನೀಡಲಾಗುವುದು. ಮಕ್ಕಳ ಜವಾಬ್ದಾರಿಯನ್ನು ಶಿಕ್ಷಕರು ವಹಿಸಬೇಕು. ತಮ್ಮ ಜವಾಬ್ದಾರಿಯನ್ನು ಅಧಿಕಾರಿಗಳು ಯಾವುದೇ ಸಮಸ್ಯೆಗಳು ಉಂಟಾಗದAತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಇತರೆ ಇಲಾಖೆಗಳ ವತಿಯಿಂದ ಸೆಪ್ಟೆಂಬರ್ ೧೦ ಮತ್ತು ೧೧ ರಂದು ಅತಿ ದೊಡ್ಡ ಯುವೋತ್ಸವ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ರಂಗೋಲಿ, ಆಹಾರ ಮೇಳ ಇನ್ನು ಮುಂತಾದ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇಲಾಖೆಗಳ ವತಿಯಿಂದ ಮಳಿಗೆಗಳನ್ನು ಸಹ ಏರ್ಪಡಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್, ಸಿನಿಮಾ ಮತ್ತು ಟಿವಿ ನಟ-ನಟಿಯರು ಭಾಗವಹಿಸುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ ಅವರು ಮಾತನಾಡಿ ನೋಂದಣಿಗೊAಡ ಮಕ್ಕಳ ಡೇಟಾವನ್ನು ಪ್ರತ್ಯೇಕಿಸಬೇಕು. ಅಂತಿಮ ಡೇಟಾವನ್ನು ಜಿಲ್ಲಾಡಳಿತಕ್ಕೆ ನೀಡಬೇಕು. ಕಾರ್ಯಕ್ರಮದ ಸಮಯಕ್ಕೆ ಎಲ್ಲಾ ಕಾರ್ಯಗಳು ಕಾರ್ಯರೂಪಕ್ಕೆ ತರಬೇಕು ಎಂದು ಸಂಬಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಜಗದೀಶ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಚನ್ನಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಆಯುಷ್ ಇಲಾಖೆಯ ಅಧಿಕಾರಿ ರಾಘವೇಂದ್ರ ಶೆಟ್ಟಿಗಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಶಶಿಕಲಾ ಸೇರಿದಂತೆ ಮತ್ತಿತರರು ಉಪಸ್ಥತರಿದ್ದರು.

Leave a Reply

Your email address will not be published. Required fields are marked *