ಕೋಲಾರ, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ದೇಶದ ಮಹಿಳಾ ಸಬಲೀಕರಣ ದೇಶದ ಐಕ್ಯತೆ ಕಾಪಾಡುವಲ್ಲಿ ಗಾಂಧೀಜಿ ಪ್ರಮುಖ ಪಾತ್ರ ವಹಿಸಿದ್ದರು. ಇಂದಿನ ಸಮಾಜದಲ್ಲಿ ಗೌರವಯುತವಾಗಿ ನಡೆಯವಲ್ಲಿ ಹಾಗೂ ಶಾಂತಿಯನ್ನು ಕಾಪಾಡುವಲ್ಲಿ ನಾವೆಲ್ಲರೂ ಪ್ರಯತ್ನಿಸಿ ಗಾಂಧೀಜಿ ಕಂಡoತಹ ರಾಮರಾಜ್ಯದ ಕನಸು ನನಸಾಗಲು ಶ್ರಮಿಸಬೇಕು ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೋಲಾರ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕೋಲಾರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿಸ್ಮೃತಿ ಹಾಗೂ ಜನಜಾಗೃತಿ ಜಾಥಾ ಮತ್ತು ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಯವರು ಭಾರತ ದೇಶಕ್ಕೆ ಶಾಂತಿ ಮಾರ್ಗದಲ್ಲಿ ಸ್ವಾತಂತ್ರ‍್ಯ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ತತ್ವ ಆದರ್ಶಗಳ ಪಾಲನೆ ಮಾಡೋಣ ಎಂದರು.
ಪ್ರಾಸ್ಥಾವಿಕ ನುಡಿಗಳಾಡಿಂತಹ ಕೋಲಾರ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಮುರಳಿಧರಶೆಟ್ಟಿ, ಧರ್ಮಸ್ಥಳ ಸಂಸ್ಥೆಯು ಸಮಾಜದ ಒಳತಿಗಾಗಿ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಸಮುದಾಯಕ್ಕೆ ಬೇಕಾದಂತoಹ ಹಲವಾರು ಸೌಲಭ್ಯಗಳನ್ನು , ಪುರಾತನ ದೇವಾಲಯಗಳ ಜೀರ್ಣೋದ್ಧಾರಗಳನ್ನು ಮಾಡುತ್ತಾ ಸಮಾಜಕ್ಕೆ ತನ್ನದೇ ಆದಂತಹ ಕೊಡುಗೆಯನ್ನು ನೀಡುತ್ತಿದೆ ಎಂದು ತಿಳಿಸಿದರು.
ಇದಕ್ಕೂ ಮುನ್ನಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಜಯಕುಮಾರ್ ಮಹಾತ್ಮ ಗಾಂಧೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಜಾಥಾಕ್ಕೆ ಚಾಲನೆ ನೀಡಿದರು.
ಜಾಥವು ನಗರ ಸಾರಿಗೆ ಬಸ್ ನಿಲ್ದಾಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸುಮಾರು ೨೫೦ ಜನಗಳಿಂದ ಘೋಷಣೆಗಳನ್ನು ಕೂಗುತ್ತಾ ಜಾಥಾ ಕಾರ್ಯಕ್ರಮವನ್ನು ಮುಂದುವರೆಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ಅಧ್ಯಕ್ಷ ವಾಸುದೇವಮೂರ್ತಿ, ಲಕ್ಷ್ಮಣಗೌಡ, ಪ್ರಗತಿಪರ ರೈತ ಚಂದ್ರಶೇಖರ್ ನೆನಮನಹಳ್ಳಿ, ಜನ ಜಾಗೃತಿ ಸದಸ್ಯರಾದ ಅರುಣಮ್ಮ, ನಂಜುoಡಯ್ಯಶೆಟ್ಟಿ, ತಾಲ್ಲೂಕು ಯೋಜನಾಧಿಕಾರಿ ಗಂಗಯ್ಯಟಿ.ಎಸ್, ಜಿಲ್ಲಾ ಜನಜಾಗೃತಿ ಯೋಜನಾಧಿಕಾರಿ ಗಣೇಶ ಆಚಾರ್ಯ, ಧರ್ಮಸ್ಥಳ ಸಂಸ್ಥೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.