ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) ಇನ್ನಿಲ್ಲ.

ಕೋಲಾರ, ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (೮೭) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು.
ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ.
ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿoದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಕೋಲಾರ ಜಿಲ್ಲಾ ಪತ್ರಕರ್ತರ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ದೇಹವನ್ನು ಅವರ ಇಚ್ಛೆಯಂತೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾನ ನೀಡಲು ಆತ್ಮೀಯರು ವ್ಯವಸ್ಥೆ ಮಾಡಿದ್ದರು.
ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) ಅವರ ನಿಧನಕ್ಕೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘವು ತೀವ್ರ ಸಂತಾಪ ಸೂಚಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್‌ಕುಮಾರ್, ರಾಜ್ಯ ಕಾರ್ಯಕಾರಿಣಿ ಸದಸ್ಯ ವಿ.ಮುನಿರಾಜು, ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್.ಗಣೇಶ್ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Leave a Reply

Your email address will not be published. Required fields are marked *