20ರಂದು ಪತ್ರಕರ್ತರ ಸಹಕಾರ ಸಂಘದ ವಾರ್ಷಿಕ ಮಹಾಸಭೆಗೆ ಕರೆ

ಕೋಲಾರ‌ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ 2021-22ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸಂಘದ ಅಧ್ಯಕ್ಷರಾದ ಕೆ.ಎಸ್.ಗಣೇಶ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 20-9-2022 ರಂದು ಮಂಗಳವಾರ ಬೆಳಗ್ಗೆ 10-30 ಗಂಟೆಗೆ ಪತ್ರಕರ್ತರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯ ಅತಿಥಿಗಳಾಗಿ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ‌ ಬ್ಯಾಲಹಳ್ಳಿ ಗೋವಿಂದಗೌಡ, ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಿ.ವಿ.ಗೋಪಿನಾಥ್ ಭಾಗವಹಿಸುವರು.

ಈಗಾಗಲೇ ಸಂಘದ ಸದಸ್ಯರಿಗೆ ಅಂಚೆ ಮೂಲಕ ಆಹ್ವಾನ ಪತ್ರಿಕೆಗಳನ್ನು ಕಳುಹಿಸಲಾಗಿದೆ. ಒಂದು ವೇಳೆ ತಲುಪದೇ ಇದ್ದಲ್ಲಿ ಇದನ್ನೇ ಆಹ್ವಾನವೆಂದು ಎಲ್ಲಾ‌ ಸದಸ್ಯರು ತಪ್ಪದೇ ಸಭೆಗೆ ಹಾಜರಾಗಿ ಯಶಸ್ವಿಗೊಳಿಸುವಂತೆ ಕೋಲಾರ‌ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ‌ ಕೆ.ಎಸ್.ಗಣೇಶ್ ಮತ್ತು ಉಪಾಧ್ಯಕ್ಷರಾದ ಕೋ.ನಾ.ಮಂಜುನಾಥ್ ತಿಳಿಸಿದ್ದಾರೆ.

Tags:

Leave a Reply

Your email address will not be published. Required fields are marked *