ಕೋಲಾರ, ಕರ್ನಾಟಕ ವಿಧಾನಸಭೆ ಚುನಾವಣೆ ಅಂಗವಾಗಿ ಮೇ ೧೦ ರಂದು ಮತದಾನ ನಡೆಯಲಿದೆ. ಮೇ ೯ ಹಾಗೂ ೧೦ ರಂದು ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಪಕ್ಷದ ಪ್ರತಿನಿಧಿಗಳು ಅಥವಾ ಸಂಘ/ಸoಸ್ಥೆ ಅಥವಾ ಯಾವುದೇ ವ್ಯಕ್ತಿ ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಜಾಹೀರಾತಿಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎoಸಿ)ಯಿoದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಚುನಾವಣೆಗೆ ಸಂಬoಧಿಸಿದ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಮಟ್ಟದ ಎಂಸಿಎoಸಿಯಿoದ ಪೂರ್ವಾನುಮತಿ ಪಡೆಯದ ಅಭ್ಯರ್ಥಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಚುನಾವಣಾ ಜಾಹೀರಾತು ಪ್ರಕಟಿಸಲು ಬಯಸುವ ರಾಜಕೀಯ ಪಕ್ಷದ ಪ್ರತಿನಿಧಿಗಳು ಹಾಗೂ ಅಭ್ಯರ್ಥಿಗಳು ಮೇ ೯ ಹಾಗೂ ೧೦ ರಂದು ಮುದ್ರಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸಬೇಕಾದರೆ ಈ ಜಾಹೀರಾತಿನ ಎರಡು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಮೇ ೭ ರೊಳಗೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎoಸಿ)ಗೆ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಎಂಸಿಎoಸಿ ಕೊಠಡಿ ಸಂಖ್ಯೆ: ಜಿ-೨೦ ಕೋಲಾರ ಇಲ್ಲಿ ಪಡೆಯಬಹುದು.
ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಮಾರ್ಗಸೂಚಿ:
ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಮೇ ೮ ರ ಸಂಜೆ ೬ ಗಂಟೆಯವರೆಗೆ ಪ್ರಸಾರ ಮಾಡುವ ಜಾಹೀರಾತಿಗೆ ಪೂರ್ವಾನುಮತಿ ಕಡ್ಡಾಯ ನಂತರ ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ ೪೮ ಗಂಟೆಗಳ ಮುಂಚೆ ಅಂದರೆ ದಿನಾಂಕ.೦೮/೦೫/೨೦೨೩, ಸಂಜೆ ೬.೦೦ ಗಂಟೆ ನಂತರ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಟಿವಿ/ರೇಡಿಯೋ/ಕೇಬಲ್ ನೆಟವರ್ಕ್, ಡಿಜಿಟಲ್ ಮಾಧ್ಯಮಗಳು, ಸಿನಿಮಾಟೋಗ್ರಾಫಿ ಅಥವಾ ಇದೇ ರೀತಿಯ ಇನ್ನಿತರ ಸಾಧನಗಳಲ್ಲಿ ಚುನಾವಣಾ ಸಂಬoಧಿ ವಿಷಯಗಳ ಎಂಸಿಎoಸಿ ಪೂರ್ವಾನುಮತಿ ಪಡೆಯದ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ-೧೯೫೧ರ ಕಲಂ ೧೨೬ರ ಪ್ರಕಾರ ನಿಷೇಧಿಸಲಾಗಿದೆ.
ಚುನಾವಣಾ ವಿಷಯ ಎಂದರೆ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲು ಅಥವಾ ಪರಿಣಾಮ ಬೀರಲು ಉದ್ದೇಶಿಸಿರುವ ಅಥವಾ ಲೆಕ್ಕಹಾಕಿದ ಯಾವುದೇ ವಿಷಯಗಳಾಗಿರುತ್ತವೆ. ಈ ಕಾಯ್ದೆಯನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ಅಥವಾ ದಂಡ ಅಥವಾ ದಂಡ ಮತ್ತು ಶಿಕ್ಷೆ ಎರಡನ್ನೂ ವಿಧಿಸಬಹುದಾಗಿದೆ.
ಪ್ಯಾನೆಲ್ ಚರ್ಚೆ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು. ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಯ ಭವಿಷ್ಯವನ್ನು ಪ್ರಚಾರ ಮಾಡುವುದು/ಪೂರ್ವಾಗ್ರಹ ಪಡಿಸುವುದು ಅಥವಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರುವುದು. ಇದು ಇತರ ವಿಷಯಗಳ ಜೊತೆಗೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶಗಳ ಪ್ರದರ್ಶನ ಮತ್ತು ಪ್ರಮಾಣಿತ ಚರ್ಚೆಗಳು, ವಿಶ್ಲೇಷಣೆ, ದೃಶ್ಯಗಳು ಮತ್ತು ಧ್ವನಿ ಬೈಟ್ ಗಳನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ.
ಆದ್ದರಿಂದ, ಟಿವಿ/ರೇಡಿಯೊ ಚಾನಲ್‌ಗಳ, ಕೇಬಲ್ ನೆಟ್‌ವರ್ಕ್ ಮತ್ತು ಎಲ್ಲಾ ಡಿಜಿಟಲ್ ಮಾಧ್ಯಮಗಳು ಮೇಲೆ ಉಲ್ಲೇಖಿಸಲಾದ ೪೮ ಗಂಟೆಗಳ ಅವಧಿಯಲ್ಲಿ ಅವರು ಪ್ರಸಾರ ಮಾಡಿದ/ಪ್ರಸರಿಸುವ/ ಪ್ರದರ್ಶಿಸಿದ ಕಾರ್ಯಕ್ರಮಗಳ ವಿಷಯ, ಪ್ಯಾನೆಲ್ ಚರ್ಚೆ ವೀಕ್ಷಣೆಗಳು/ಮನವಿ ಸೇರಿದಂತೆ ಯಾವುದೇ ವಿಷಯವನ್ನು ಪ್ರಸಾರ ಮಾಡುವಂತಿಲ್ಲ.
ನಿಗದಿತ ೪೮ ಗಂಟೆಗಳ ಅವಧಿಯಲ್ಲಿ ಮತ್ತು ಮತದಾನ ಮುಕ್ತಾಯದ (ಸಂಜೆ ೬.೦೦) ನಂತರದ ಅರ್ಧಗಂಟೆಯವರೆಗೆ (ದಿ.೧೦/೦೫/೨೦೨೩, ಸಂಜೆ ೬.೩೦) ಅವಧಿಯಲ್ಲಿ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟಿಸುವುದು, ಚರ್ಚೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ನಿಷೇಧಿಸಿದೆ ಇದೂ ಸಹಾ ಪ್ರಜಾಪ್ರತಿನಿಧಿ ಕಾಯ್ದೆ ೧೯೫೧ರ ಕಲಂ ೧೨೬ ರ ವ್ಯಾಪ್ತಿಯಲ್ಲಿ ಬರುತ್ತವೆ.
ಕರ್ನಾಟಕ ವಿಧಾನಸಭೆ ಚುನಾವಣೆ-೨೦೨೩ ಅಂಗವಾಗಿ ಮೇ ೧೦ ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದ್ದರಿಂದ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಆಭ್ಯರ್ಥಿಗಳು, ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮಗಳು ಮೇ ೮ ರ ಸಂಜೆ ೬ ಗಂಟೆಯಿoದ ಮೇ ೧೦ ರ ಸಂಜೆ ಸಂಜೆ ೬.೩೦ ಅಥವಾ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಮೇಲ್ಕಂಡ ನಿರ್ದೇಶನಗಳನ್ನು ಪಾಲಿಸುವಂತೆ ತಿಳಿಸಲಾಗಿದೆ.