ಕೋಲಾರ, ಕರ್ನಾಟಕ ವಿಧಾನಸಭಾ ಚುನಾವಣೆ-೨೦೨೩ರ ಸಂಬoಧ ಮೇ ೧೦ , ೨೦೨೩ರ ಬುಧವಾರದಂದು ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಮತ ಚಲಾಯಿಸಲು ಅನುವಾಗುವಂತೆ ಆಯಾ ಮತಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿ, ಶಾಲಾ- ಕಾಲೇಜು, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿ)ಸರ್ಕಾರವು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರ್ಕಾರಿ ನೌಕರರು ಚುನಾವಣಾ ಕರ್ತವ್ಯಕ್ಕೆ ಹಾಜರಾಗತಕ್ಕದ್ದು, ಆಯಾ ಕ್ಷೇತ್ರಗಳಲ್ಲಿ ಮತದಾನ ಸುಸೂತ್ರವಾಗಿ ನಡೆಯಲು ಮತದಾನ ನಡೆಯುವ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ದಲ್ಲಿ ಅಂತಹ ಕಚೇರಿ ಹಾಗೂ ಕಚೇರಿಗಳಿಗೆ ಮೇ ೯, ೨೦೨೩ರಂದು ಪೂರ್ವ ತಯಾರಿಗಾಗಿ ಹಾಗೂ ಮತ ಎಣಿಕೆ ನಡೆಯುವ ಮೇ ೧೩, ೨೦೨೩ರಂದು ಮತ ಎಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬoಧಪಟ್ಟ ಚುನಾವಣಾಧಿಕಾರಿಗಳು ಕ್ರಮ ವಹಿಸತಕ್ಕದ್ದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.