ಕೋಲಾರ,ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಇವರು ಸ್ವಂತ ಉದ್ಯಮವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ ೧೦ ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು.
ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯಮ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಈ ತರಬೇತಿಯು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಇದಕ್ಕಾಗಿ ಕೋಲಾರ ಜಿಲ್ಲೆಯ ಆಸಕ್ತ ಪರಿಶಿಷ್ಟ ಪಂಗಡ (ಎಸ್.ಟಿ) ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ೧೮ ವರ್ಷ ದಿಂದ ೪೫ ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು/ಬರೆಯಲು ಬರುತ್ತಿರಬೇಕು. ಪರಿಶಿಷ್ಟ ಪಂಗಡದ ಎಲ್ಲಾ ಅಭ್ಯರ್ಥಿಗಳಿಗೂ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ಸಲ್ಲಿಸಲು ಸೆಪ್ಟೆಂಬರ್ ೨೬ ರ ವರೆಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಛೇರಿ, ಸಿಡಾಕ್, ಜಿಲ್ಲಾ ಕೈಗಾರಿಕ ಕೇಂದ್ರ, ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣ, ಕೋಲಾರ ಅಥವಾ ದೂರವಾಣಿ ಸಂಖ್ಯೆ ೯೯೪೫೯೯೭೦೭೫ ಗೆ ಸಂಪರ್ಕಿಸಬಹುದು.