ಕೋಲಾರ, ದಲಿತರ ಮೇಲೆ ನಡೆದಂತಹ ದೌರ್ಜನ್ಯ ಪ್ರಕರಣಗಳನ್ನು ನೊಂದಾಯಿಸಿಕೊ0ಡು ಕಾನೂನಿನ ರೀತಿಯಲ್ಲಿ ನೊಂದ ದಲಿತರಿಗೆ ಅನ್ಯಾಯವಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ದಲಿತರ ಮೇಲೆ ಪ್ರಕರಣಗಳು ಕಂಡುಬAದರೆ ನೆರವಾಗಿ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಹಾಗೂ ಸಮಿತಿ ಸದಸ್ಯರಿಗೆ ತಲುಪಿಸಬೇಕು. ಯಾವುದೇ ಪ್ರಕರಣಗಳು ಇದ್ದಲ್ಲಿ ಶೇ.೧೦೦ ರಷ್ಟು ಇತ್ಯರ್ಥವಾಗಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ವಿದ್ಯಾರ್ಥಿವೇತನ ನೀಡಬೇಕು. ಸಿ.ಎಸ್.ಆರ್ ಫಂಡ್ ನಿಂದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ನೀಡಲಾಗುವುದು ಹಾಗೂ ಸಿ.ಇ.ಟಿ ಮತ್ತು ನೀಟ್ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿಗೆ ಅವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಸರ್ಕಾರದ ಸುತ್ತೋಲೆಯ ಪ್ರಕಾರ ಎಲ್ಲಾ ಸಮುದಾಯದವರಿಗೂ ಸ್ಮಶಾನ ಭೂಮಿ ಒದಗಿಸಲಾಗುತ್ತದೆ. ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರ ಪಟ್ಟಿಯನ್ನು ನೀಡುವಂತೆ ಎಂದು ಡಾ|| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗೆ ಸೂಚಿಸಿದರು.
ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಬರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ಜಿಲ್ಲಾಸ್ಪತ್ರೆಯಲ್ಲಿ ಖಾಲಿಯಿರುವ ಶುಶ್ರೂಕಿಯರನ್ನು ಶೀಘ್ರದಲ್ಲಿ ನೇಮಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಅನುದಾನ ಮತ್ತು ನರೇಗಾ ಅನುದಾನದಲ್ಲಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು, ಅದರಲ್ಲಿ ಸಮಾಜದಲ್ಲಿ ಉತ್ತಮ ಸಾಧನೆ ಮಾಡಿರುವವರ ಭಾವಚಿತ್ರಗಳನ್ನು ಅಳವಡಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದವರಿಗೆ ಸರ್ಕಾರದಿಂದ ನೀಡುವ ಸಾಲಗಳನ್ನು ನೇರವಾಗಿ ಫಲಾನುಭವಿಗಳಿಗೆ ನೀಡಬೇಕು. ಇದರಲ್ಲಿ ಯಾವುದೇ ತಾರತಮ್ಯ ಮಾಡಬಾರದು. ಅಂಗನವಾಡಿಗಳಿಗೆ ಸರಬರಾಜು ಆಗುತ್ತಿರುವ ಆಹಾರದ ಸಾಮಾಗ್ರಿಗಳನ್ನು ಎಷ್ಟು ಪ್ರಮಾಣದಲ್ಲಿ ನೀಡಲಾಗುತ್ತಿದೆ ಎಂಬುದರ ಬಗ್ಗೆ ಪಟ್ಟಿಯನ್ನು ಅಂಗನವಾಡಿ ಕೇಂದ್ರಗಳ ಸೂಚನ ಫಲಕಗಳಲ್ಲಿ ಅಳವಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಮಾತನಾಡಿ ಪ್ರತಿ ತಿಂಗಳು ಮೂರನೇ ಭಾನುವಾರದಂದು ದೂರುದಾರರ ದಿನವೆಂದು ಆಚರಿಸಲಾಗುವುದು. ದಲಿತರ ಸಭೆಗಳ ಜೊತೆಗೆ ಜನಸಂಪರ್ಕ ಸಭೆಯನ್ನು ಸಹ ನಡೆಸಲಾಗುತ್ತಿದೆ. ಪ್ರಕರಣಗಳಲ್ಲಿ ಸಂಧಾನಕ್ಕೆ ಒತ್ತಡ ಹೇರುವವರ ಮೇಲೆ ದೂರು ನೀಡಿದರೆ ಕ್ರಮಕೈಗೊಳ್ಳಲಾಗುತ್ತದೆ. ಸಾಕ್ಷಿಗಳಿಗೆ ಭದ್ರತೆ ಮತ್ತು ಸರಿಯಾದ ಸಮಯಕ್ಕೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಅಧಿಕಾರೇತರ ಸದಸ್ಯರು ಸಮಸ್ಯೆಗಳನ್ನು ಅಧಿಕಾರಿಗಳಿಗೆ ತಿಳಿಸಿದರು. ಈ ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು ಎಂದು ಸದಸ್ಯರಿಗೆ ತಿಳಿಸಿದರು.
ಸಭೆಯಲ್ಲಿ ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ|| ಧರಣೀದೇವಿ, ಉಪ ವಿಭಾಗಧಿಕಾರಿ ವೆಂಕಟಲಕ್ಷಿö್ಮ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಚನ್ನಬಸಪ್ಪ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.