ದಲಿತರಿಗೆ ಅನ್ಯಾಯವಾಗದಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ – ಎಂ.ಪಿ. ಕುಮಾರಸ್ವಾಮಿ

ಕೋಲಾರ, ದಲಿತರ ಮೇಲೆ ದೌರ್ಜನ್ಯ ಹಾಗೂ ಜಾತಿನಿಂದನೆ ಘಟನೆಗಳು ಕಂಡುಬ0ದಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ನೊಂದ ದಲಿತರಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಎಂ.ಪಿ.ಕುಮಾರಸ್ವಾಮಿ ಅವರು ಸೂಚಿಸಿದರು.
ಇಂದು ಮಾಲೂರು ತಾಲ್ಲೂ ಕಿನ ಟೇಕಲ್ ಹೋಬಳಿಯ ಉಳ್ಳೇರಹಳ್ಳಿ ಗ್ರಾಮದಲ್ಲಿ ವಾಸ ವಾಗಿರುವ ಪರಿಶಿಷ್ಟ ಜಾತಿ ಬಾಲಕನ ಕುಟುಂಬದವರಿಗೆ ದಂಡ ವಿಧಿಸಿರುವ ಕುರಿತು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಸಾಂತ್ವನ ಹಾಗೂ ನೆರವಿನ ಭರವಸೆ ನೀಡಿ ನಂತರ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಕರೆದಿದ್ದ ಅಧಿಕಾರಿಗಳ ಸಭೆ ಯನ್ನುದ್ದೇಶಿಸಿ ಮಾತನಾಡಿದರು.
ಸಂತ್ರಸ್ತರ ಕುಟುಂಬವು ಪ್ರಸ್ತುತ ಭಯದ ವಾತಾವರಣ ದಲ್ಲಿದ್ದು, ಸೂಕ್ತ ರಕ್ಷಣೆಯನ್ನು ಒದಗಿಸಲು ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿ ಗಳಿಗೆ ಸೂಚಿಸಲಾಗಿದೆ. ಸರ್ಕಾರ ದಿಂದ ಸಂತ್ರಸ್ತರಿಗೆ ನಿಯ ಮಾನುಸಾರ ಲಭ್ಯವಾಗಬೇಕಾದ ಸೌಲಭ್ಯಗಳನ್ನು ಒದಗಿಸಲು ಕೂಡಲೇ ಕ್ರಮವಹಿಸಬೇಕು ಎಂದು ಸಂಬ0ಧಪಟ್ಟ ಅಧಿಕಾರಿ ಗಳಿಗೆ ಸೂಚಿಸಿದರು.
ತಪ್ಪಿತಸ್ತರ ವಿರುದ್ಧ ಈಗಾ ಗಲೇ ಕಾನೂನು ಕ್ರಮಕೈಗೊಳ್ಳ ಲಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯ ದಂತೆ ಎಚ್ಚರಿಕೆ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾದ ಮಹೇಶ್, ಕುಮಾರಸ್ವಾಮಿ, ಬಿ.ಹರ್ಷವರ್ಧನ್, ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ವ ರಿಷ್ಠಾಧಿಕಾರಿಗಳಾದ ಡಿ.ದೇವರಾಜ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾದ ಚನ್ನಬಸಪ್ಪ, ಮಾಲೂರು ತಾಲ್ಲೂಕು ತಹಶೀಲ್ದಾರ್ ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *