ಕೋಲಾರ, ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ ರವರ ನಿರ್ದೇಶನದಂತೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾರರಿಗೆ ಜಾಗೃತಿ ಮೂಡಿಸುವ ಅಂಗವಾಗಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀನಿವಾಸಪುರದ ಪ್ರಮುಖ ರಸ್ತೆಗಳಲ್ಲಿ ತಾಲ್ಲೂಕು ಚುನಾವಣಾಧಿಕಾರಿಗಳಾದ ನಂದಿನಿ ಅವರು ಸಂಚರಿಸಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣಿಕರಿಗೆ, ಬೀದಿ ಬದಿಯ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ಗುಲಾಬಿ ಹೂ ನೀಡುವುದರ ಮೂಲಕ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು. ಇದೇ ಸಂದರ್ಭದಲ್ಲಿ
ಎಂ.ಜಿ. ರಸ್ತೆಯಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ಶಿರೀನ್ ತಾಜ್, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ಪುರಸಭಾ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ಆರೋಗ್ಯ ಅಧಿಕಾರಿ ವಿಶ್ವನಾಥ್, ಸಿಡಿಪಿಒ ಶೋಭಾ ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.