ಕೋಲಾರ, ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಐದನೇ ದಿನವಾದ ಬುದವಾರ ೨೯ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದು, ಜಿಲ್ಲೆಯಲ್ಲಿ ಈವರೆಗೆ ಒಟ್ಟು ೮೦ ನಾಮಪತ್ರಗಳು ಸಲ್ಲಿಕೆಯಾಗಿವೆ.
ಜಿಲ್ಲೆಯ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಸಾರ್ವಜನಿಕ ಪಕ್ಷೇತರ ಅಭ್ಯರ್ಥಿಯಾಗಿ ಪಿ.ವೆಂಕಟೇಶಪ್ಪ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಎನ್.ವಿಜಯ್ ಕುಮಾರ್, ಪಕ್ಷೇತರ ಅಭ್ಯರ್ಥಿಯಾಗಿ ವೆಂಕಟೇಶಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀನಿವಾಸ, ಜೆ.ಡಿಎಸ್ ಅಭ್ಯರ್ಥಿಯಾಗಿ ಮಂಜುನಾಥ್ ೨ ನಾಮಪತ್ರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಎಂ.ಗೋಪಾಲ್ ಮತ್ತು ಕಾಂಗ್ರೇಸ್ ಅಭ್ಯರ್ಥಿಯಾಗಿ ಸಿ.ವಿ ಗೋಪಾಲ್ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಶ್ರೀನಿವಾಸಪುರ ವಿಧಾನಸಭಾ ಮತಕ್ಷೇತ್ರದಿಂದ ಇಂದು ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಜಿ.ಆರ್ ಶ್ರೀನಿವಾಸರೆಡ್ಡಿ ೨ ನಾಮಪತ್ರಗಳನ್ನು ಸಲ್ಲಿಸಿರುತ್ತಾರೆ.
ಕೋಲಾರ ವಿಧಾನಸಭಾ ಕ್ಷೇತ್ರದಿಂದ ಬಿ.ಜೆ.ಪ ಪಕ್ಷದ ಅಭ್ಯರ್ಥಿಯಾಗಿ ವರ್ತುರು ಪ್ರಕಾಶ್ ಮತ್ತೊಮ್ಮೆ ಜೆ.ಡಿ.ಎಸ್ ಪಕ್ಷದ ಅಭ್ಯರ್ಥಿಯಾಗಿ ಸಿ.ಎಂ.ಆರ್ ಶ್ರೀನಾಥ್ ಮತ್ತೊಮ್ಮೆ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಬೈರಾರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.
ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಆರ್.ಹರಿಕೃಷ್ಣ, ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಎಂ.ನಾರಯಣಸ್ವಾಮಿ ೨ ನಾಮಪತ್ರ , ಪಕ್ಷೇತರ ಅಭ್ಯರ್ಥಿಯಾಗಿ ಜ್ಯೋತೀಶ ಕೋಲಾರ ರವರು ನಾಮಪತ್ರ ಸಲ್ಲಿಸಿದ್ದಾರೆ.
ಮಾಲೂರು ವಿಧಾನಸಭಾ ಕ್ಷೇತ್ರದಿಂದ, ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ರವಿಶಂಕರ್, ಬಿ.ಜೆ.ಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ಎಸ್ ಮಂಜುನಾಥಗೌಡ ಪಕ್ಷೇತರ ಅಭ್ಯರ್ಥಿಯಾಗಿ ಶಶಿಕುಮಾರ್ ಎಸ್ , ಪಕ್ಷೇತರ ಅಭ್ಯರ್ಥಿಯಾಗಿ ಎನ್.ದೇವಾನಂದ ಬಾಬು , ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಎನ್.ರಮೇಶ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಜಯಮ್ಮ ನಾಮಪತ್ರ ಸಲ್ಲಿಸಿದ್ದಾರೆ.
ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಎ.ಐ.ಎ.ಡಿ.ಎಂ.ಕೆ ಪಕ್ಷದ ಅಭ್ಯರ್ಥಿಯಾಗಿ ಎಂ.ಉಷಾ , ಜೆ.ಡಿ.ಎಸ್ ಪಕ್ಷೇತರ ಅಭ್ಯರ್ಥಿಯಾಗಿ ಡಾ.ರಮೇಶ್ ಬಾಬು ವಿ.ಎಂ , ಪಕ್ಷೇತರ ಅಭ್ಯರ್ಥಿಯಾಗಿ ಬಿ.ಸುರೇಶ್ ಕುಮಾರ್ , ಬಿ.ಎಸ್.ಪಿ ಪಕ್ಷದ ಅಭ್ಯರ್ಥಿಯಾಗಿ ಆರ್.ಕೊದಂಡ, ಪಕ್ಷೇತರ ಅಭ್ಯರ್ಥಿಯಾಗಿ ಜಿ.ಡಿ.ಚೆನ್ನಕೇಶವ ಹಾಗೂ ಎಸ್.ಅಶ್ವಿನಿ ರವರು ಬಿ.ಜಿ.ಪಿ ಪಕ್ಷದಿಂದ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ ಇಂದು, ಶ್ರೀನಿವಾಸಪುರದಲ್ಲಿ ೨, ಮಾಲೂರಿನಲ್ಲಿ ೬, ಮುಳಬಾಗಿಲಿನಲ್ಲಿ ೮, ಕೆಜಿಎಫ್ ನಲ್ಲಿ ೬ ಹಾಗೂ ಕೋಲಾರದಲ್ಲಿ ೩ ಹಾಗೂ ಬಂಗಾರಪೇಟೆಯಲ್ಲಿ ೦೪ ಉಮೇದುವಾರಿಕೆಗಳು ಸೇರಿ ಒಟ್ಟು ೨೯ ನಾಮಪತ್ರಗಳು ಸಲ್ಲಿಕೆಯಾಗಿವೆ. ಒಟ್ಟಾರೆ ಜಿಲ್ಲೆಯಲ್ಲಿ ೮೦ ಉಮೇದುವಾರಿಕೆಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಇನ್ನೂ ಒಂದು ದಿನ ಬಾಕಿ ಇದ್ದು, ಏಪ್ರಿಲ್ ೨೦ ಕೊನೆ ದಿನವಾಗಿದೆ. ಏಪ್ರಿಲ್ ೨೧ ಶುಕ್ರವಾರದಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ ೨೪ ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ ೧೦ ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿರುತ್ತಾರೆ.