ಕೋಲಾರ, ೨೦೨೩-೨೪ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕೋಲಾರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಾದ ಕೋಲಾರ, ಬಂಗಾರಪೇಟೆ, ಕೆಜಿಎಫ್ ಮತ್ತು ಶ್ರೀನಿವಾಸಪುರ ಶಾಲೆಗಳಲ್ಲಿ ೬ನೇ ತರಗತಿ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ರಾಜ್ಯದ ನಿವಾಸಿಯಾಗಿರಬೇಕು. ಕುಟುಂಬದ ವಾರ್ಷಿಕ ವರಮಾನವು ರೂ.೨.೫೦ ಲಕ್ಷಗಳಿಗೆ ಮೀರಬಾರದು. ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶೇ.೭೫ ರಷ್ಟು (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌದ್ಧ ಮತ್ತು ಪಾರ್ಸಿ) ಹಾಗೂ ಶೇ.೨೫ ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಮತ್ತು ಪ್ರತಿ ತರಗತಿಯಲ್ಲಿ ಹೆಣ್ಣು ಮಕ್ಕಳಗೆ ಶೇ.೫೦% ಮೀಸಲಿರಿಸಲಾಗಿದೆ. ಪಠ್ಯಪುಸ್ತಕ, ಸಮವಸ್ತ್ರ, ಲೇಖನ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು. ಆಸಕ್ತಿಯುಳ್ಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ/ತಾಲ್ಲೂಕು ಮಾಹಿತಿ ಕೇಂದ್ರಗಳು ಹಾಗೂ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನೆಲ ಮಹಡಿ, ಮೌಲಾನಾ ಆಜಾದ್ ಭವನ, ಶ್ರೀ ದೇವರಾಜ್ ಅರಸು ಬಡಾವಣೆ, ೨ನೇ ಬ್ಲಾಕ್, ಟಮಕ ವಾರ್ಡ್ ನಂ.೧. ಕೋಲಾರ ದೂರವಾಣಿ ಸಂಖ್ಯೆ: ೦೮೧೫೨-೨೯೫೨೫೭, ಮೌಲಾನಾ ಆಜಾದ್ ಮಾದರಿ ಶಾಲೆಗಳು, ಕೋಲಾರ ಮೊಬೈಲ್ ಸಂಖ್ಯೆ: ೮೩೧೭೪೯೮೩೩, ಬಂಗಾರಪೇಟೆ ಮೊಬೈಲ್ ಸಂಖ್ಯೆ: ೯೦೧೯೮೪೭೮೭೪, ಕೆಜಿಎಫ್ ಮೊಬೈಲ್ ಸಂಖ್ಯೆ: ೯೦೧೯೮೪೭೮೭೪ ಮತ್ತು ಶ್ರೀನಿವಾಸಪುರ ಮೊಬೈಲ್ ಸಂಖ್ಯೆ ೯೩೮೦೦೯೩೭೭೯ ರವರಿಂದ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.