ದಾವಣಗೆರೆ : ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿರುವ ವಿನೋತ್ ಪ್ರಿಯಾ ಆರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹುದ್ದೆಯ ಪ್ರಭಾರದಲ್ಲಿಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದಿಂದ ಏಪ್ರಿಲ್ 29 ರಂದು ಅಧಿಸೂಚನೆ ಹೊರಡಿಸಲಾಗಿದೆ.ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಸೇವೆಗಳು-4), ಸರ್ಕಾರದ ಅಧೀನ ಕಾರ್ಯದರ್ಶಿ ನಾಗಪ್ಪ ಎಸ್.ಪಾರೀತ್ ಸರ್ಕಾರದ ಅಧಿಸೂಚನೆ ಹೊರಡಿಸಿದ್ದಾರೆ.